SSLC ಮತ್ತು PUC ಆಗಿದ್ದರೆ ಅಂಗನವಾಡಿ ಟೀಚರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ : ಒಟ್ಟು 2,439 ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಮಹಿಳೆಯರಿಗೆ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. ಸದ್ಯ ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಅಂಗನವಾಡಿ ಟೀಚರ್ ಹಾಗೂ ಸಹಾಯಕಿಯರು ಹುದ್ದೆಗಳಿಗೆ ಬೃಹತ್ ಸಂಖ್ಯೆಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮೀಸಲಾದಂತಹ ಕ್ಷೇತ್ರ ಮಹಿಳೆಯರಿಗೆ ಇದು ಎಂದು ಹೇಳಬಹುದು.

apply-for-anganwadi-teacher-posts
apply-for-anganwadi-teacher-posts

ಅಲ್ಲದೆ ತಾವು ವಾಸಿಸುವ ವ್ಯಾಪ್ತಿಯಲ್ಲಿ ಮಹಿಳೆಯರಿಗೆ ಉದ್ಯೋಗ ಮಾಡುವ ಅವಕಾಶವೂ ಕೂಡ ಇದರಿಂದ ಸಿಗುತ್ತದೆ ಅಲ್ಲದೆ ಈ ಹುದ್ದೆಯೂ ಅನೇಕರ ಕನಸಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಈ ಲೇಖನದ ಮಾಹಿತಿಯನ್ನು ಸಂಪೂರ್ಣವಾಗಿ ಓದಿ.

ಅಂಗನವಾಡಿ ಟೀಚರ್ ಹಾಗೂ ಸಹಾಯಕಿ ನೇಮಕಾತಿ :

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಅಂಗನವಾಡಿ ಸಹಾಯಕಿ ಮತ್ತು ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವಂತಹ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಅರ್ಜಿ ಶುಲ್ಕದ ವಿವರ ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ ಶೈಕ್ಷಣಿಕ ಅರ್ಹತೆ ವಯಸ್ಸಿನ ಮಿತಿ ಸೇರಿದಂತೆ ಹಲವಾರು ವಿಷಯಗಳನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.

ಹುದ್ದೆಗಳ ವಿವರ :

  1. ನೇಮಕಾತಿ ಸಂಸ್ಥೆ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
  2. ಕಾಲಿ ಇರುವ ಹುದ್ದೆಗಳ ಹೆಸರು : ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು
  3. ಕಾಲಿರುವ ಒಟ್ಟು ಹುದ್ದೆಗಳ ಸಂಖ್ಯೆ : 2439
  4. ಅರ್ಜಿ ಸಲ್ಲಿಸುವ ವಿಧಾನ : ಆನ್ಲೈನ್ ಮೂಲಕ
  5. ಅಧಿಕೃತ ವೆಬ್ಸೈಟ್ : https://karnemakone.kar.nic.in
  6. ಉದ್ಯೋಗದ ಸ್ಥಳ : ಕರ್ನಾಟಕ

ಜಿಲ್ಲಾ ವಾರು ಹುದ್ದೆಗಳು :

  1. ಮಂಡ್ಯ : 341
  2. ದಕ್ಷಿಣ ಕನ್ನಡ : 335
  3. ರಾಯಚೂರು :391
  4. ರಾಮನಗರ : 216
  5. ವಿಜಯನಗರ : 297
  6. ಗದಗ : 196
  7. ಬಳ್ಳಾರಿ : 102
  8. ಉಡುಪಿ : 193
  9. ಯಾದಗಿರಿ : 490

ಶೈಕ್ಷಣಿಕ ಅರ್ಹತೆ :

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೇಮಕಾತಿ ಅಧಿಸೂಚನೆಯ ಅನ್ವಯ ಖಾಲಿ ಇರುವಂತೆ ಹುದ್ದೆಗಳಿಗೆ ಅಭ್ಯರ್ಥಿಗಳು ಈ ಕೆಳಗಿನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

  1. ಅಂಗನವಾಡಿ ಕಾರ್ಯಕರ್ತೆ ಹುದ್ದೆ : ಪಿಯುಸಿ, ಎಸ್ ಎಸ್ ಎಲ್ ಸಿ,
  2. ಅಂಗನವಾಡಿ ಸಹಾಯಕಿ ಹುದ್ದೆ : 10ನೇ ತರಗತಿ

ವಯಸ್ಸಿನ ಮಿತಿ :

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಕಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ.

  1. ಕನಿಷ್ಠ ವಯಸ್ಸು 19
  2. ಗರಿಷ್ಠ ವಯಸ್ಸು 35
    ಅಂಗವಿಕಲ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ
  3. ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ಅರ್ಜಿ ಸಲ್ಲಿಸುವ ವಿಧಾನ :

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೇಮಕಾತಿ ಅಧಿಸೂಚನೆ ಅನ್ವಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅಧಿಕೃತ ವೆಬ್ಸೈಟ್ : https://karnemakone.kar.nic.in

ಪ್ರಮುಖ ದಿನಾಂಕಗಳು :

ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತ ಹುದ್ದೆಗಳಿಗೆ ಅರ್ಜಿಯನ್ನು ಸೂಚಿಸಲು ಅಭ್ಯರ್ಥಿಗಳಿಗೆ ಪ್ರತಿಯೊಂದು ಜಿಲ್ಲೆಗೂ ಪ್ರತ್ಯೇಕವಾದ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ದಿನಾಂಕಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.

ಆಯ್ಕೆಯ ವಿಧಾನ :

ಮಹಿಳ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೇಮಕಾತಿ ಅಧಿಸೂಚನೆಯ ಅನ್ವಯ ಅಭ್ಯರ್ಥಿಗಳನ್ನು ಈ ಕೆಳಗಿನ ವಿಧಾನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  1. ಜೇಷ್ಠತಾ ಆಧಾರದ

ವಿಶೇಷ ಸೂಚನೆ :

  1. ಶೈಕ್ಷಣಿಕ ಅರ್ಹತೆ ಮತ್ತು ಇನ್ನಿತರ ಅರ್ಹತೆ ಮಾನದಂಡಗಳನ್ನು ಪರಿಗಣಿಸಿ ಅರ್ಜಿಯನ್ನು ಸಲ್ಲಿಸಿರುವವರ ಜೇಷ್ಠತೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
  2. ಪ್ರಾಥಮಿಕ ತರಬೇತಿಯನ್ನು ಅಂಗೀಕೃತ ಸಂಸ್ಥೆಗಳಿಂದ ಐಸಿಸಿ ಕೋರ್ಸ್ ಅಥವಾ ಡಿಪ್ಲೋಮಾ ಅಥವಾ ಜೆ ಓ ಸಿ ಅಥವಾ ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಪಟ್ಟಂತೆ ಡಿಪ್ಲೋಮೋ ಪಡೆದವರು ಹಾಗೂ ಒಂದು ವರ್ಷದ ನರ್ಸರಿ, ನ್ಯೂಟ್ರಿಷನ್, ಹೋಂ ಸೈನ್ಸ್ ನ ಅಭ್ಯರ್ಥಿಗಳಿಗೂ ಅರ್ಜಿಯನ್ನು ಸಲ್ಲಿಸಲು ಆದ್ಯತೆ ನೀಡಲಾಗಿದೆ.
  3. ವಿಧವೆಯರು ವಿಚ್ಛೇದರು ಪರಿಚಯಕ್ತರು ಆಸಿಡ್ ದಾಳಿಗೆ ಒಳಗಾಗಿರುವವರು ಹಾಗೂ ಅಂಗವಿಕಲರು ಅರ್ಜಿ ಸಲ್ಲಿಸಬಹುದು.

ಹೀಗೆ ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆದು ತಮ್ಮ ಆರ್ಥಿಕ ಸ್ಥಿತಿಯನ್ನು ಸಧಾರಿಸಿಕೊಳ್ಳಬಹುದಾಗಿದೆ. ಈ ಲೇಖನದಲ್ಲಿ ತಿಳಿಸಲಾದ ಉದ್ಯೋಗದ ಮಾಹಿತಿಯನ್ನು ಪ್ರತಿಯೊಬ್ಬ ಮಹಿಳೆಯರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Comment