ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ಹೊಸ ಲೇಬರ್ ಕಾರ್ಡ್ ಗೆ ಸಂಬಂಧಿಸಿದಂತೆ ಅರ್ಜಿಗಳು ಪ್ರಾರಂಭವಾಗಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ನೀವೇನಾದರೂ ಹೊಸ ಲೇಬರ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಬಯಸುತ್ತಿದ್ದರೆ ಯಾವ ವಿಧಾನವನ್ನು ಅರ್ಜಿಯನ್ನು ಸಲ್ಲಿಸಲು ಅನುಸರಿಸಬೇಕು ಎಂಬುದರ ಬಗ್ಗೆ ಈ ಲೇಖನದಲ್ಲಿ ತಿಳಿದುಕೊಳ್ಳಬಹುದು. ಈ ಒಂದು ಲೇಬರ್ ಕಾರ್ಡ್ ನಿಂದ ಏನೆಲ್ಲಾ ಪ್ರಯೋಜನಗಳು ಸಿಗಲಿವೆ. ಲೇಬರ್ ಕಾರ್ಡ್ ಮಾಡಿಸಲು ಏನಿಲ್ಲ ದಾಖಲೆಗಳು ಬೇಕು ಎಂಬುದರ ಬಗ್ಗೆ ಈ ಕೆಳಗಿನಂತೆ ತಿಳಿಸಲಾಗಿದೆ.
ಹೊಸ ಲೇಬರ್ ಕಾರ್ಡಿಗೆ ಅರ್ಜಿ ಪ್ರಾರಂಭ :
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ರಾಜ್ಯದ ಜನತೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತವೆ. ಅಲ್ಲದೆ ಜಾರಿಗೆ ತಂದಂತಹ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಬೇಕಾದರೆ ಈ ಕಾರ್ಡನ್ನು ಹೊಂದಿದ್ದರೆ ಸಾಕಷ್ಟು ಲಾಭವನ್ನು ಪಡೆಯಬಹುದಾಗಿದೆ. ಇದೀಗ ಸರ್ಕಾರ ಹೊಸ ಲೇಬರ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಕಾರ್ಮಿಕ ಇಲಾಖೆಯಿಂದ ಬಿಡುಗಡೆಯಾದಂತಹ ಎಲ್ಲಾ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಲು ಈ ಲೇಬರ್ ಕಾರ್ಡ್ ಅಗತ್ಯವಾಗಿದೆ. ಒಂದು ವೇಳೆ ನಿಮ್ಮ ಬಳಿ ಕಾರ್ಮಿಕರ ಕಾರ್ಡ್ ಇಲ್ಲದೆ ಹೋದರೆ ಜಾರಿಗೆ ತಂದಂತಹ ಯೋಜನೆಗಳ ಲಾಭವನ್ನು ಪಡೆಯಲು ಸಾಧ್ಯವಾಗುವುದಿಲ್ಲ.
ಈ ಕಾರ್ಮಿಕ ಕಾರ್ಡ್ ಕೇವಲ ನಿಮಗಷ್ಟೇ ಮಾತ್ರವಲ್ಲದೆ ನಿಮ್ಮ ಮಕ್ಕಳಿಗೂ ಕೂಡ ಹೆಚ್ಚಿನ ಪ್ರಯೋಜನವನ್ನು ಒದಗಿಸುತ್ತದೆ. ಲೇಬರ್ ಕಾರ್ಡ್ ಸ್ಕಾಲರ್ಶಿಪ್ 10 ಸಾವಿರದಿಂದ ನಲವತ್ತು ಸಾವಿರ ರೂಪಾಯಿಗಳವರೆಗೆ ವಿದ್ಯಾರ್ಥಿ ವೇತನವನ್ನು ಲೇಬರ್ ಕಾರ್ಡ್ ಹೊಂದಿರುವಂತಹ ವ್ಯಕ್ತಿಗಳ ಮಕ್ಕಳಿಗೆ ನೀಡಲಾಗುತ್ತಿದ್ದು ಇದರ ಪ್ರಯೋಜನವನ್ನು ಪಡೆದುಕೊಳ್ಳಲು ಲೇಬರ್ ಕಾರ್ಡ್ ಅಗತ್ಯವಾಗಿದೆ. ಹಾಗಾಗಿ ನಿಮ್ಮ ಬಳಿ ಏನಾದರೂ ಲೇಬರ್ ಕಾರ್ಡ್ ಇಲ್ಲದಿದ್ದರೆ ಈ ಕೂಡಲೇ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ತಮ್ಮ ಹತ್ತಿರದ ಕೇಂದ್ರಕ್ಕೆ ಭೇಟಿ ನೀಡಿ ಆನ್ಲೈನ್ ಮೂಲಕ ಲೇಬರ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಬಹುದು.
ಲೇಬರ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಪ್ರಮುಖ ದಾಖಲೆಗಳು :
- ಆಧಾರ್ ಕಾರ್ಡ್
- ಉದ್ಯೋಗಿ ದೃಢೀಕರಣ ಪತ್ರ
- ಮೊಬೈಲ್ ನಂಬರ್
- ಬ್ಯಾಂಕ್ ಪಾಸ್ ಬುಕ್
- ಸ್ವಯಂ ದೃಡೀಕರಣ ಪತ್ರ
- ಮನೆಯ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ನೀವೇನಾದರೂ ಲೇಬರ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಬಯಸುತ್ತಿದ್ದರೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ತಮ್ಮ ಹತ್ತಿರದ ಗ್ರಾಮವನ್ ಕೇಂದ್ರಕ್ಕೆ ಭೇಟಿ ನೀಡಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೀವೇನಾದರೂ ಮೊಬೈಲ್ ಮೂಲಕ ಅರ್ಜಿಯನ್ನು ಸಲ್ಲಿಸಲು ಬಯಸುತ್ತಿದ್ದರೆ ಸಾಧ್ಯವಾಗುವುದಿಲ್ಲ ಅರ್ಜಿಯನ್ನು ಸಲ್ಲಿಸಲು ಗ್ರಾಮವನ್ ಕೇಂದ್ರಕ್ಕೆ ಭೇಟಿ ನೀಡಬೇಕು.
ಒಟ್ಟಾರೆ ಕರ್ನಾಟಕ ಸರ್ಕಾರ ಇದೀಗ ಹೊಸ ಲೇಬರ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಲೇಬರ್ ಕಾರ್ಡ್ ಅನ್ನು ಮಾಡಿಸಲು ಅರ್ಜಿಯನ್ನು ಸಲ್ಲಿಸಬಹುದು. ನಿಮಗೆ ತಿಳಿದಿರುವಂತಹ ಕಾರ್ಮಿಕರಿಗೆ ಲೇಬರ್ ಕಾರ್ಡ್ ಮಾಡಿಸಲು ಅರ್ಜಿ ಪ್ರಾರಂಭಿಸಲಾಗಿದೆ ಎಂಬುದರ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.