ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಕರ್ನಾಟಕ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣದ ಮಂಡಳಿಯ ವತಿಯಿಂದ ನೋಂದಾಯಿತ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಂದ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಇದಕ್ಕೆ ಅರ್ಜಿಯನ್ನು ಸಲ್ಲಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು. ಇದಕ್ಕೆ ಸಂಬಂಧಿಸಿದಂತೆ ಇನ್ನು ಹೆಚ್ಚಿನ ಮಾಹಿತಿಯನ್ನು ನಾವು ನಿಮಗೆ ಈ ಲೇಖನದಲ್ಲಿ ನೀಡುತ್ತೇವೆ, ಮಿಸ್ ಮಾಡದೆ ಕೊನೆಯವರೆಗೂ ಓದಿ.

2024- 25 ನೇ ಸಾಲಿಗೆ ಕಟ್ಟಡ & ಇತರೆ ನಿರ್ಮಾಣದ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕವಾಗಿ ಹಣಕಾಸಿನ ಸಹಾಯವನ್ನು ನೀಡಲಾಗುವುದು. ರಾಜ್ಯದ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ, ಹಾಗೆ ಇದಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 30 ಅಗಿರುತ್ತದೆ.
ಈಗಾಗಲೇ ಸರ್ಕಾರದ ಹಲವು ಇಲಾಖೆಗಳಲ್ಲಿ ರಾಜ್ಯ ವಿದ್ಯಾರ್ಥಿವೇತನದ ತಂತ್ರಾಂಶದ ಮೂಲಕ ಅರ್ಜಿಯನ್ನು ಸಲ್ಲಿಸಿರುವಂತಹ ಫಲಾನುಭವಿಗಳು ಪುನಃ ಅರ್ಜಿಯನ್ನು ಸಲ್ಲಿಸಲು ಯಾವುದೆ ರೀತಿಯ ಅವಶ್ಯಕತೆ ಇರುವುದಿಲ್ಲ. ಮೀಸಲಿಟ್ಟ ಆಯವ್ಯಯಕ್ಕೆ ಅನುಗುಣವಾಗಿ ಮಂಡಳಿಯ ನಿರ್ಣಯದಂತೆ ಅರ್ಹ ಫಲಾನುಭವಿಗಳಿಗೆ ಶೈಕ್ಷಣಿಕವಾದ ಸಹಾಯಧನವನ್ನು ವಿತರಣೆ ಮಾಡಲಾಗುವುದು.
ಇತರೆ ವಿಷಯಗಳು:
ಹೊಸ ಲೇಬರ್ ಕಾರ್ಡ್ ಗೆ ಈ ಕೂಡಲೇ ಅರ್ಜಿ ಸಲ್ಲಿಸಿ : ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ
ಚಿನ್ನದ ದರದಲ್ಲಿ ಸತತ 3 ದಿನದಿಂದ ಭಾರೀ ಇಳಿಕೆ! ಇಲ್ಲಿದೆ ಇವತ್ತಿನ ದರಪಟ್ಟಿ