ನಮಸ್ಕಾರ ಸ್ನೇಹಿತರೆ ಹೊಸ ಪಡಿತರ ಚೀಟಿಗೆ ಸಂಬಂಧಿಸಿದಂತೆ ಇವತ್ತಿನ ಲೇಖನದಲ್ಲಿ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಮಾಹಿತಿಯನ್ನು ತಿಳಿದುಕೊಳ್ಳಲು ಆಸಕ್ತಿ ಹೊಂದಿರುವಂತಹ ಜನರು ಈ ಲೇಖನದಲ್ಲಿ ತಿಳಿಸಲಾಗುವ ಮಾಹಿತಿಯನ್ನು ಸಂಪೂರ್ಣವಾಗಿ ಓದಬೇಕು.

ಸದ್ಯ ಇದೀಗ ರಾಜ್ಯ ಸರ್ಕಾರ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಶೀಘ್ರದಲ್ಲಿಯೇ ಆರಂಭ ಮಾಡಲಿದೆ ಎನ್ನುವ ಮಾಹಿತಿಗಳು ಕೇಳಿ ಬರುತ್ತಿದ್ದು ಯಾವಾಗ ಪ್ರಾರಂಭವಾಗಲಿದೆ ಎಂಬುದರ ವಿವರವನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ.
ಬಿಪಿಎಲ್ ರೇಷನ್ ಕಾರ್ಡ್ :
ಕರ್ನಾಟಕದಲ್ಲಿರುವಂತಹ ಸಾಕಷ್ಟು ಜನರು ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಕಾತುರದಿಂದ ಕಾಯುತ್ತಿದ್ದಾರೆ ಎಂದು ಹೇಳಬಹುದು. ಪಡಿತರ ಚೀಟಿ ಇಲ್ಲದೆ ಇದ್ದರೆ ಕಾಂಗ್ರೆಸ್ ನೀಡಿರುವಂತಹ ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಲು ಕರ್ನಾಟಕದ ಜನತೆಗೆ ಸಾಧ್ಯವಾಗುವುದಿಲ್ಲ. ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವಂತಹ ಯೋಜನೆಗಳ ಲಾಭವನ್ನು ಪಡೆಯಬೇಕಾದರೆ ಬಿಪಿಎಲ್ ರೇಷನ್ ಕಾರ್ಡ್ ಇರಲೇಬೇಕು.
ಕರ್ನಾಟಕದಲ್ಲಿ ವಾಸಿಸುವ ಜನರು ಬಿಪಿಎಲ್ ರೇಷನ್ ಕಾರ್ಡ್ ಇಲ್ಲದೆ ಹೋದರೆ ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳನ್ನು ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ ಆದ್ದರಿಂದಲೇ ಸಾಕಷ್ಟು ಜನರು ಹೊಸ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ ಸದ್ಯ ಈಗ ಪಡಿತರ ಚೀಟಿಯ ವಿತರಣೆಗಾಗಿ ಕಾಯುತ್ತಿದ್ದು ಮತ್ತೆ ಯಾವಾಗ ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದು ಕಾಯುತ್ತಿದ್ದಾರೆ.
ಹೊಸ ಪಡಿತರ ಚೀಟಿಗೆ ಶೀಘ್ರದಲ್ಲಿ ಅರ್ಜಿ ಆಹ್ವಾನ :
ಕರ್ನಾಟಕದಲ್ಲಿರುವ ಪ್ರತಿಯೊಬ್ಬರೂ ಕೂಡ ಹೊಸ ಪಡಿತರ ಚೀಟಿಗೆ ಅರ್ಜಿಗಳು ಯಾವಾಗ ಪ್ರಾರಂಭವಾಗಲಿದೆ ಎಂದು ಕಾಯುತ್ತಿದ್ದಾರೆ. ಅಲ್ಲದೆ ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಪ್ರಮುಖ ದಾಖಲೆಗಳು ಯಾವುವು ಹೇಗೆ ಅರ್ಜಿ ಸಲ್ಲಿಸಬೇಕು ಅನುಸರಿಸಬೇಕಾದ ಕ್ರಮಗಳೇನು ಎಂಬುದರ ಬಗ್ಗೆ ಇದೀಗ ನೋಡುವುದಾದರೆ.
ರಾಜ್ಯ ಸರ್ಕಾರ ಇದೆ ಸೆಪ್ಟೆಂಬರ್ 15 ಇಲ್ಲ 16ರಂದು ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಅರ್ಜಿಗಳನ್ನು ಪ್ರಾರಂಭ ಮಾಡಲಿದೆ ಎಂಬುದರ ಮಾಹಿತಿಗಳು ತಿಳಿದು ಬಂದಿದೆ. ಆದರೂ ಕೂಡ ರಾಜ್ಯ ಸರ್ಕಾರ ಯಾವ ದಿನದಂದು ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಇದನ್ನು ಓದಿ : JIO ಕಂಪನಿಯಿಂದ 5G ಸ್ಮಾರ್ಟ್ ಫೋನ್ ಬಿಡುಗಡೆ : ಇಲ್ಲಿದೆ ಮೊಬೈಲ್ ನ ವಿಶೇಷತೆಗಳು
ಪಡಿತರ ಚೀಟಿಗೆ ಪ್ರಮುಖ ದಾಖಲೆಗಳು :
ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಪ್ರಮುಖ ದಾಖಲೆಗಳನ್ನು ಹೊಂದಿರಬೇಕು ಆಗ ಮಾತ್ರ ಸುಲಭವಾಗಿ ಹಾಗೂ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಸಾಧ್ಯವಾಗುತ್ತದೆ.
- ಆಧಾರ್ ಕಾರ್ಡ್.
- ಪಾಸ್ಪೋರ್ಟ್ ಸೈಜ್ ಫೋಟೋ.
- ಜಾತಿ ಪ್ರಮಾಣ ಪತ್ರ.
- ಆದಾಯ ಪ್ರಮಾಣ ಪತ್ರ.
- ಮೊಬೈಲ್ ನಂಬರ್.
- ವೋಟರ್ ಐಡಿ.
- ಆರು ವರ್ಷದೊಳಗಿನ ಮಗುವಿದ್ದರೆ ಜನನ ಪ್ರಮಾಣ ಪತ್ರ
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ತಮ್ಮ ಹತ್ತಿರದ ಅಥವಾ ತಮ್ಮ ಊರಿನ ಗ್ರಾಮವನ್ ಕೇಂದ್ರಕ್ಕೆ ಭೇಟಿ ನೀಡಿ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ರೇಷನ್ ಕಾರ್ಡ್ ಗೆ ಹೊಸದಾಗಿ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಸರ್ಕಾರಿ ಕೇಂದ್ರಗಳಿಗೆ ಭೇಟಿ ನೀಡುವುದು ಮುಖ್ಯವಾಗಿರುತ್ತದೆ ಆಗ ಮಾತ್ರ ನಿಮ್ಮ ಅರ್ಜಿಗಳು ಸರಿಯಾಗಿ ಸಲ್ಲಿಕೆ ಆಗಿದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ.
ಒಟ್ಟಾರೆ ರಾಜ್ಯ ಸರ್ಕಾರ ಇನ್ನೇನು ಕೆಲವೇ ದಿನಗಳಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ ಮಾಡುತ್ತಿದೆ. ಹಾಗಾಗಿ ನಿಮಗೆ ತಿಳಿದಿರುವಂತಹ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೀಘ್ರದಲ್ಲಿ ರಾಜ್ಯ ಸರ್ಕಾರ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತಿದೆ ಎಂಬುದರ ಬಗ್ಗೆ ತಿಳಿಸಿ.
ಇದರಿಂದ ಅವರೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಕಾಯುತ್ತಿದ್ದರೆ ಅವರಿಗೆ ಇದೊಂದು ಉತ್ತಮ ಅವಕಾಶವಾಗಲಿದೆ ಧನ್ಯವಾದಗಳು