ನಮಸ್ಕಾರ ಸ್ನೇಹಿತರೇ ಸದ್ಯ ಇದೀಗ ಬರುತ್ತಿರುವ ಹಬ್ಬ ಎಂದರೆ ಅದು ಗೌರಿ ಗಣೇಶ ಹಬ್ಬ ಆಗಿದ್ದು ಈ ಹಬ್ಬದ ದಿನದಂದು ಕೇಂದ್ರದಿಂದ ರಾಜ್ಯದ ರೈತರಿಗೆ ಬಿಗ್ ಗಿಫ್ಟ್ ಸಿಗಲಿದೆ.
ಮತ್ತೆರಡು ಬೆಲೆಗಳನ್ನು ರಾಜ್ಯದಲ್ಲಿ ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಹಾಗಾದರೆ ಯಾವ ಎರಡು ಬೆಳೆಗಳನ್ನು ಕೇಂದ್ರ ಸರ್ಕಾರ ಖರೀದಿ ಮಾಡಲಿದೆ ಎಷ್ಟು ಬೆಲೆ ಇರಲಿ ಎಂಬುದರ ಮಾಹಿತಿಯನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.
ಕೇಂದ್ರದಿಂದ ರೈತರಿಗೆ ಬಿಗ್ ಗಿಫ್ಟ್ :
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕೇಂದ್ರ ಸರ್ಕಾರವು ರೈತರ ಮತ್ತೆರಡು ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ಸರ್ಕಾರ ಅನುಮತಿಸಿದೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಹೆಸರುಕಾಳು ಮತ್ತು ಸೂರ್ಯಕಾಂತಿ ಜೊತೆಗೆ ಇದೀಗ ಉದ್ದು ಮತ್ತು ಸೋಯಾಬೀನ್ ಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುವಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ತಿಳಿಸಿದ್ದಾರೆ.
ಹೆಸರುಕಾಳು ಮತ್ತು ಸೂರ್ಯಕಾಂತಿ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ನಾಲ್ಕೈದು ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ಮತ್ತೆ ಇದೀಗ ಉದ್ದು ಮತ್ತು ಸೋಯಾಬಿನ್ ಗಳನ್ನು ಕೂಡ ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ಅನುಮೋದನೆ ನೀಡಿದೆ. ಇದರ ಮೂಲಕ ಗಣೇಶ ಹಬ್ಬದ ಪ್ರಯುಕ್ತ ರಾಜ್ಯದ ರೈತರಿಗೆ ಗಿಫ್ಟ್ ಅನ್ನು ಕೇಂದ್ರ ಸರ್ಕಾರ ನೀಡಿದೆ ಎಂದು ಹೇಳಬಹುದು.
ಉದ್ದು ಮತ್ತು ಸೋಯಾಬೀನ್ ಗೆ ಬೆಂಬಲ ಬೆಲೆ :
ರಾಜ್ಯದಲ್ಲಿ ಹೆಸರು ಮತ್ತು ಸೂರ್ಯಕಾಂತಿಗೆ ಬೆಂಬಲ ಬೆಲೆ ಘೋಷಿಸಿ ಖರೀದಿ ಮಾಡಲು ಕೇಂದ್ರ ತೆರೆಯುತ್ತಿದ್ದಂತೆಯೇ ಇದೀಗ ಕೇಂದ್ರ ಪ್ರಶಿ ಸಚಿವಾಲಯ ಉದ್ದು ಮತ್ತು ಸೋಯಾಬೀನ್ ಬೆಳೆಗಳಿಗೂ ಕೂಡ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ.
ಇದನ್ನು ಓದಿ : Railway : 12ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆ ಅರ್ಜಿ ಆಹ್ವಾನ : 11,558 ಹುದ್ದೆಗಳು ಖಾಲಿ
ಬೆಂಬಲ ಬೆಲೆ ಯೋಜನೆ :
2024 ಮತ್ತು 25ರ ಮುಂಗಾರು ಹಂಗಾಮಿ ದಲ್ಲಿ ಕರ್ನಾಟಕದಲ್ಲಿ ಬೆಂಬಲ ಬೆಲೆ ಯೋಜನೆಯ ಅಡಿಯಲ್ಲಿ 19760 ಮೆಟ್ರಿಕ್ ಟನ್ ಉದ್ದು ಮತ್ತು 103315 ಮೆಟ್ರಿಕ್ ಟನ್ ಸೋಯಾಬಿನ್ ಖರೀದಿ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.
ಈ ಬೆಳೆಗಳಿಗೆ ಮುಕ್ತ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಇರುವುದರಿಂದ MSP ಅಡಿಯಲ್ಲಿ ಬೆಳೆಗಳನ್ನು ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಕ್ರಮವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ ಎಂದು ಸಚಿವ ಪ್ರಹ್ಲಾದ್ ಜೋಶಿ ಅವರು ತಿಳಿಸಿದ್ದಾರೆ.
90 ದಿನಗಳ ಅವಧಿಗೆ ರಾಜ್ಯದಲ್ಲಿ ಖರೀದಿ ಕೇಂದ್ರವನ್ನು ತೆರೆದು ಬೆಂಬಲ ಬೆಲೆ ಯೋಜನೆಯ ಅಡಿಯಲ್ಲಿ ರಾಜ್ಯ ಸರ್ಕಾರಕ್ಕೆ ಕೇಂದ್ರ ಕೃಷಿ ಸಚಿವಾಲಯವು ಉದ್ದು ಮತ್ತು ಸೋಯಾಬೀನ್ ಬೆಳೆಗಳನ್ನು ಖರೀದಿಸುವಂತೆ ಆಗಸ್ಟ್ 29ರಂದು ಆದೇಶ ಹೊರಡಿಸಿದೆ ಎಂದು ಕೇಂದ್ರ ಸಚಿವರು ತಿಳಿಸಿದರು.
ಬೆಂಬಲ ಬೆಲೆ :
- ಉದ್ದಿನ ಕಾಳು 7,400.
- ಸೋಯಾಬಿನ್ 4,892.
ಬೆಂಬಲ ಬೆಲೆಯನ್ನು ನಿಗದಿಪಡಿಸಲು ಕೇಂದ್ರ ಸರ್ಕಾರ ತಿಳಿಸಿದೆ. ಕಳೆದ ವರ್ಷ ಮುದ್ದಿನ ಕಾಳಿಗೆ 6950 ಬೆಂಬಲ ಬೆಲೆಯಿದ್ದು ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 450ಗಳಷ್ಟು ಹೆಚ್ಚಳ ಕಂಡಿದೆ. 4600 ಸೋಯಾಬೀನ್ ಬೆಲೆ ಇದ್ದು ಇದೀಗ 292 ರೂಪಾಯಿಗಳಷ್ಟು ಹೆಚ್ಚಳವಾಗುವುದರ ಮೂಲಕ ಬೆಂಬಲ ಬೆಲೆ ಘೋಷಣೆ ಮಾಡಲಾಗಿದೆ.
ತಕ್ಷಣ ಕೈದಿ ಕೇಂದ್ರ ತೆರೆಯಲು ಒತ್ತಾಯ :
ರಾಜ್ಯದ್ಯಂತ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಆರಂಭಿಸಿ ಹೆಸರುಕಾಳು ಸೂರ್ಯಕಾಂತಿ ಅದರ ಜೊತೆಗೆ ಉದ್ದಿನಕಾಳು ಮತ್ತು ಸೋಯಾಬೀನ್ ಖರೀದಿ ಪ್ರಕ್ರಿಯೆಗೆ ರಾಜ್ಯ ಸರ್ಕಾರ ತಕ್ಷಣವೇ ಚಾಲನೆ ನೀಡಬೇಕೆಂದು ಸಚಿವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮತ್ತು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನಿರಂತರವಾಗಿ ರಾಜ್ಯದ ರೈತರ ಸಮಸ್ಯೆಗೆ ಸ್ಪಂದಿಸುತ್ತಲೇ ಬಂದಿದ್ದಾರೆ. ಇದೀಗ 4 ಬೆಳೆಗಳಿಗೆ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಿದ್ದಾರೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು ತಿಳಿಸಿದ್ದಾರೆ.
ಒಟ್ಟಾರೆ ಕೇಂದ್ರ ಸರ್ಕಾರವು ಗಣೇಶ ಹಬ್ಬದ ಪ್ರಯುಕ್ತ ರಾಜ್ಯದ ರೈತರಿಗೆ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ತೆರೆಯಲು ಒತ್ತಾಯಿಸಿದ್ದು ಇದರಿಂದ ರೈತರು ತಮ್ಮ ಬೆಳೆಗಳನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಉತ್ತಮ ಆದಾಯವನ್ನು ಪಡೆದುಕೊಳ್ಳಬಹುದು.
ಹಾಗಾಗಿ ಎಲ್ಲ ರೈತರಿಗೂ ಕೇಂದ್ರ ಸರ್ಕಾರವು ಬೆಂಬಲ ಬೆಲೆ ಕೇಂದ್ರವನ್ನು ತೆರೆಯಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ ಎಂಬುದರ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.